ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದ ವ್ಯಕ್ತಿಯನ್ನು ಬಂಡೆ ಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗನಮ್ಮನ ಪಾಳ್ಯ ನಿವಾಸಿ ನವಾಜ್ ಬಂಧಿತ ಆರೋಪಿಯಾಗಿದ್ದು,
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
“ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು” ಎಂದು ಪಬ್ಲಿಕ್ ಸರ್ವೆಂಟ್ ಎಂಬ ಐಡಿಯಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದನು.
ವಿಡಿಯೋ ಆಧರಿಸಿ ದೂರು ದಾಖಲಿಸಿಕೊಂಡಿದ್ದ ಬಂಡೆ ಪಾಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ.