ನವದೆಹಲಿ: ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು. ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ. ಆದರೂ ಪಾಕಿಸ್ತಾನ ತನ್ನ ವರಸೆಯನ್ನು ಬಿಡದೆ ಭಾರತದ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಇದೀಗ ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೋಸ್ಟರ್ಗಳನ್ನು ಅಂಟಿಸಿ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಉಲ್ಲೇಖಿಸಿದ್ದಾರೆ.
ಸದ್ಯ ಜಮ್ಮು ಮತ್ತು ಕಾಶ್ಮೀರದಾದ್ಯಂತ `ಭಯೋತ್ಪಾದನೆ ಮುಕ್ತ ಕಾಶ್ಮೀರ’ ಎಂಬ ಸಂದೇಶಗಳನ್ನು ಒಳಗೊಂಡಿರುವ ಪೋಸ್ಟರ್ಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಲಷ್ಕರ್-ಇ-ತೈಬಾದ ಮೂವರು ಭಯೋತ್ಪಾದಕರಾದ ಅನಂತ್ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಪಾಕ್ ಪ್ರಜೆಗಳಾದ ಅಲಿ ಭಾಯ್ ಅಕಾ ತಲ್ಹಾ ಭಾಯ್ ಮತ್ತು ಹಶಿಮ್ ಮೂಸಾ ಅಕಾ ಸುಲೇಮಾನ್ ಫೋಟೋಗಳಿವೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕ್ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತು. ಅದಾದ ಬಳಿಕ ಪಾಕಿಸ್ತಾನ ಹಲವು ಬಾರಿ ಅಪ್ರಚೋದಿತ ದಾಳಿ ನಡೆಸಿದ್ದು, ಮೇ 10ರಂದು ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ.