ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು.