ಬೆಂಗಳೂರು: ನಾಗರಿಕರ ಹೆಸರಿನಲ್ಲಿ ನಾಳೆ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡುತ್ತೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು, ಸೇನಾಪಡೆಗಳ ಜೊತೆ ನಿಂತು ಬಲ ತುಂಬುವುದು ತಿರಂಗಾ ಯಾತ್ರೆಯ ಉದ್ದೇಶವಾಗಿದೆ. ಹೀಗಾಗಿ, ರಾಜ್ಯದಲ್ಲಿ ಕೂಡ ದೊಡ್ಡಮಟ್ಟದಲ್ಲಿ ತಿರಂಗಾ ಯಾತ್ರೆ ಮಾಡುತ್ತಿದ್ದೇವೆ.
ಮೇ 15ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡುತ್ತೇವೆ. ಮಲ್ಲೇಶ್ವರಂನ ಶಿರೂರು ಪಾರ್ಕ್ನಿಂದ 18ನೇ ಕ್ರಾಸ್ವರೆಗೆ ತಿರಂಗಾ ಯಾತ್ರೆ ಮಾಡುತ್ತೇವೆ. ಮೇ 16, 17ರಂದು ಜಿಲ್ಲಾ ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದೆ. ಮೇ 18ರಿಂದ 23ರವರೆಗೆ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ತಿರಂಗಾ ಯಾತ್ರೆಯಲ್ಲಿ ಯಾವುದೇ ಪಕ್ಷದ ಧ್ವಜ ಬಳಕೆ ಮಾಡಲ್ಲ ಎಂದು ಹೇಳಿದರು.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಇನ್ನೂ ಪಹಲ್ಗಾಮ್ ಘಟನೆಗೆ ನಮ್ಮ ಸೈನಿಕರು ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಧಾನಿ ಮೋದಿಯವರು ನಿನ್ನೆ ಅಣ್ವಸ್ತ್ರಗಳಿಗೆಲ್ಲ ಭಾರತ ಬಗ್ಗಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ದೇಶದ ವಿಚಾರದಲ್ಲಿ ದ್ವಂದ್ವ ನೀತಿ ಪ್ರದರ್ಶನ ಮಾಡುವುದು ಬೇಡ. ಯುದ್ಧ ಆರಂಭಕ್ಕೂ ಮುನ್ನ ಯುದ್ಧದ ಅವಶ್ಯಕತೆ ಇದೆ ಎಂದಿದ್ದರು. ಯುದ್ಧ ಆರಂಭವಾದ ಮೇಲೆ ಶಾಂತಿ ಎಂದರು. ಯುದ್ಧ ನಿಲ್ಲಿಸಿದಾಗ ಯುದ್ಧ ಮಾಡಬೇಕಿತ್ತು ಎನ್ನುತ್ತಿದ್ದಾರೆ. ಇದು ಸರಿಯಲ್ಲ ಎಂದರು.