ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಶರಣಾಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಶರಣಾಗುವ ಪ್ರಶ್ನೆಯೇ ಉದ್ಭವಿಸಲ್ಲ, ಮೋದಿಯವರ ರಾಜತಾಂತ್ರಿಕ ನಡೆಗಳನ್ನು ಅರ್ಥಮಾಡಿಕೊಳ್ಳದವರು ಹೀಗೆಲ್ಲ ಮಾತಾಡುತ್ತಾರೆ, ನಿನ್ನೆ ರಾಷ್ಟ್ರಕ್ಕೆ ನೀಡಿದ ಸಂದೇಶದಲ್ಲಿ ಪ್ರಧಾನಿ ಮೋದಿಯವರು ಎಲ್ಲ ವಿಷಯಗಳನ್ನು ವಿವರಿಸಿದ್ದಾರೆ ಎಂದು ಹೇಳಿದರು.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಇನ್ನೂ ಪ್ರತಿ ಜಿಲ್ಲೆಯಲ್ಲಿಯೂ ತಿರಂಗ ಯಾತ್ರೆ ನಡೆಯಲಿದೆ. ಈ ಯಾತ್ರೆಯಲ್ಲಿ ಮೆರವಣಿಗೆ ನಡೆಯಲಿದೆ. ಸುಮಾರು 4-5 ಸಾವಿರ ಜನ ಸೇರಲಿದ್ದಾರೆ. ಯಾತ್ರೆಯಲ್ಲಿ ಮಾಜಿ ಸೈನಿಕರು, ಹೋರಾಟಗಾರರು, ದೇಶಭಕ್ತರೆಲ್ಲರೂ ಭಾಗವಹಿಸಲಿದ್ದಾರೆ ಎಂದರು. ಮೇ 14ರಂದು ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ.
ಮೇ 15ರಂದು ಮಂಗಳೂರು, ಬೆಳಗಾವಿಯಂತಹ ನಗರದಲ್ಲಿ ನಡೆಯಲಿದೆ. ಮೇ 16ರಂದು ಇತರೆ ಜಿಲ್ಲೆಯಲ್ಲಿ ನಡೆಯಲಿದೆ. ಮೇ 18ರಿಂದ 23ರವರೆಗೆ ತಾಲೂಕು ಮಟ್ಟದಲ್ಲಿ ನಡೆಯಲಿದೆ. ಮೇ 16ರಂದು ಶಿವಮೊಗ್ಗದಲ್ಲಿ ನಡೆಯುವ ಯಾತ್ರೆಯಲ್ಲಿ ನಾನು ಭಾಗಿಯಾಗಲಿದ್ದೇನೆ ಎಂದು ಹೇಳಿದರು.