ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ಪ್ರಶಾಂತ್ ಲೇಔಟ್‌ನ ಪಿಜಿಯಲ್ಲಿ ನಡೆದಿದೆ. ಛತ್ತೀಸ್‌ಗಢ ಮೂಲದ 26 ವರ್ಷದ ಶುಭಾಂಶು ಶುಕ್ಲಾ ಬಂಧಿತ ಆರೋಪಿಯಾಗಿದ್ದು,
ಆತ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾನೆ. ಆರೋಪಿಯು ಮೇ 9ರ ಮಧ್ಯರಾತ್ರಿ 12.30 ರ ಸಮಯದಲ್ಲಿ, ಪಿಜಿಯಲ್ಲಿದ್ದ ಇತರ ಯುವಕರು ‘ಆಪರೇಷನ್ ಸಿಂಧೂರ್’ ಯಶಸ್ಸನ್ನು ಸಂಭ್ರಮಿಸುತ್ತಿದ್ದ ವೇಳೆ ಬಾಲ್ಕನಿಯಲ್ಲಿ ನಿಂತು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲಿದ್ದ ಯುವಕರು ತುರ್ತು ಸಹಾಯವಾಣಿ ಸಂಖ್ಯೆಗೆ 112 ಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಶುಭಾಂಶು ಪಾಕ್ ಪರ ಘೋಷಣೆ ಕೂಗಿದ್ದು ವಿಚಾರಣೆ ವೇಳೆ ದೃಢಪಟ್ಟಿದ್ದು, ವೈಟ್‌ಫೀಲ್ಡ್ ಠಾಣೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸದ್ಯ ತನಿಖೆ ಮುಂದುವರಿದಿದೆ.