ನವದೆಹಲಿ: ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಇಂದು 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಕರ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತಿತರರು ಭಾಗವಹಿಸಿದ್ದರು.
ಇದಕ್ಕೂ ಮೊದಲು ಸುಪ್ರೀಂಕೋರ್ಟ್ನ 51ನೇ ಮುಖ್ಯ ನ್ಯಾಯಮೂರ್ತಿ ಆಗಿ ಸಂಜೀವ್ ಖನ್ನಾ ಅವರು ಕರ್ತವ್ಯ ನಿರ್ವಹಿಸಿದ್ದರು. ಇವರ ಅವಧಿ 11 ನವೆಂಬರ್ 2024 ರಿಂದ 13 ಮೇ 2025ರ ವರೆಗೆ ಮಾತ್ರ ಇತ್ತು. ಖಾಲಿಯಾಗಿದ್ದ ಈ ಅತ್ಯುನ್ನತ ಹುದ್ದೆಗೆ ಮುಖ್ಯ ನ್ಯಾಯಮೂರ್ತಿ ಆಗಿ ನ್ಯಾ.ಭೂಷಣ ರಾಮಕೃಷ್ಣ ಗವಾಯಿ ಅವರು ಆಯ್ಕೆ ಆಗಿದ್ದರು. ಅದರಂತೆ ಇಂದು ಅಧಿಕಾರ ತೆಗೆದುಕೊಂಡಿದ್ದಾರೆ.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ಕೇವಲ 6 ತಿಂಗಳು ಮಾತ್ರ ಈ ಉನ್ನತ ಸ್ಥಾನದಲ್ಲಿ ಇರುತ್ತಾರೆ. ಅಂದರೆ 2025ರ ನವೆಂಬರ್ನಲ್ಲಿ ವೃತ್ತಿಯಿಂದ ಗವಾಯಿ ಅವರು ನಿವೃತ್ತರಾಗುತ್ತಾರೆ. ನಂತರ ಈ ಸ್ಥಾನಕ್ಕೆ ಮತ್ತೊಬ್ಬರು ಆಯ್ಕೆ ಆಗುತ್ತಾರೆ.
ಮುಂಬೈ ಹೈಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದ ಗವಾಯಿ ಅವರು 1985ರಲ್ಲಿ ಸೀನಿಯರ್ ಜೂರಿಸ್ಟ್ ಬಾರ್ಗೆ ಸೇರಿಕೊಂಡರು. ನಂತರ ಮುಂಬೈ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ 2003ರಲ್ಲಿ ಆಯ್ಕೆ ಆಗಿದ್ದರು. ಬಳಿಕದ 2005ರಲ್ಲಿ ಖಾಯಂ ನ್ಯಾಯಾಧೀಶರಾದರು. ಗವಾಯಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ 2019 ರಲ್ಲಿ ಬಡ್ತಿ ನೀಡಲಾಗಿತ್ತು.