ಉತ್ತರ ಪ್ರದೇಶ: ಯಾರಾದರೂ ನಮಗೆ ತೊಂದರೆ ನೀಡಿದ್ರೆ ನಾವು ಅವರನ್ನು ಬಿಡುವುದಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿ, ಅವರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ನಮ್ಮ ಸೈನಿಕರು ‘ನಾವು ಯಾರಿಗೂ ತೊಂದರೆ ನೀಡುವುದಿಲ್ಲ. ಆದರೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಅಮಾನವೀಯ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಯೋಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಇಡೀ ಜಗತ್ತು ಈಗ ಭಾರತೀಯ ಸೈನಿಕರ ಶೌರ್ಯವನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.