ಭೋಪಾಲ್: ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಕುನ್ವರ್ ವಿಜಯ್ ಶಾ ಅವರು ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಹೌದು ಇತ್ತೀಚೆಗೆ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಮಧ್ಯಪ್ರದೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಬಿಜೆಪಿ ನಾಯಕ ವಿಜಯ್ ಶಾ,
An impudent BJP MP #VijayShah pretends to be sad before the camera, but doesn't hide his draconian smile. #राष्ट्रद्रोही_विजय_शाह pic.twitter.com/GIlu4FmEdh
— 𝕶𝖆𝖓𝖍𝖆𝖎𝖞𝖆 𝕾𝖎𝖓𝖌𝖍 (@MrKanhaiyasingh) May 13, 2025
ಪ್ರಧಾನಿ ಮೋದಿ ಅವರನ್ನು ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂದು ಕರೆದಿದ್ದರು. ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ವಿಜಯ್ ಶಾ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಧ್ಯ ಪ್ರದೇಶ ಸಚಿವ ವಿಜಯ್ ಶಾ, ಸಹೋದರಿ ಸೋಫಿಯಾ ಖುರೇಷಿ ಬಗ್ಗೆ ನಾನು ಕನಸಿನಲ್ಲೂ ಆ ರೀತಿ ಭಾವಿಸಲು ಸಾಧ್ಯವಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಿಸ್ಟರ್ ಸೋಫಿಯಾ ಜಾತಿ ಮತ್ತು ಧರ್ಮವನ್ನು ಮೀರಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಅವರು ನಮ್ಮ ಸ್ವಂತ ಸಹೋದರಿಗಿಂತ ಹೆಚ್ಚು ಗೌರವಾನ್ವಿತರು.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ಅವರು ರಾಷ್ಟ್ರಕ್ಕೆ ಮಾಡಿದ ಸೇವೆಗೆ ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ್ಮ ಕನಸಿನಲ್ಲಿಯೂ ಅವರನ್ನು ಅವಮಾನಿಸುವ ಬಗ್ಗೆ ನಾವು ಯೋಚಿಸಲು ಸಹ ಸಾಧ್ಯವಿಲ್ಲ. ಆದರೂ, ನನ್ನ ಮಾತುಗಳು ಸಮಾಜ ಮತ್ತು ಧರ್ಮಕ್ಕೆ ನೋವುಂಟು ಮಾಡಿದ್ದರೆ, ನಾನು ಒಂದಲ್ಲ ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.