ಬೆಳಗಾವಿ: ಮೊನ್ನೆಯಷ್ಟೇ ನಾವು ಪಾಕಿಸ್ತಾನ ಮೇಲೆ ಆಕ್ರಮಣ ನಡೆಸಿ ಅದನ್ನು ಬಗ್ಗುಬಡಿದ ಭಾರತೀಯ ಸೇನೆಯ ದಿನದ ಚಟುವಟಿಕೆಗಳನ್ನು ಮತ್ತು ಸೇನೆಯ ಯಶಸನ್ನು ಮಾಧ್ಯಮಗಳಿಗೆ ವಿವರಿಸುತ್ತಿದ್ದ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿಯವರ ವಿರುದ್ಧ ಸುಳ್ಳು ಆರೋಪಗಳು ಕೇಳಿ ಬಂದಿವೆ.
ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಇರುವ ಸೋಫಿಯಾ ಖುರೇಷಿ ಅವರ ಮಾವ ಗೌಸಸಾಬ್ ಬಾಗೇವಾಡಿ ನಿವಾಸದ ಮೇಲೆ ದಾಳಿ ಮಾಡಲಾಗಿದೆ ಎಂದು ಅನೀಸ್ ಉದ್ದೀನ್ ಎಂಬಾತನ ಎಕ್ಸ್ ಖಾತೆಯಿಂದ ಪೋಸ್ಟ್ ಹಾಕಲಾಗಿತ್ತು. ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ಈ ಕುರಿತು ಸ್ಪಷ್ಟನೆ ನೀಡಿರುವ ಡಾ. ಭೀಮಾಶಂಕರ ಗುಳೇದ, ಇದೊಂದು ಸುಳ್ಳು ಸುದ್ದಿ. ಇಂತಹ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿ ಹರಡುತ್ತಿದ್ದಂತೆ ಬೆಳಗಾವಿ ಜಿಲ್ಲಾ ಪೊಲೀಸರು, ಕೊಣ್ಣೂರಿನಲ್ಲಿರುವ ಗೌಸಸಾಬ್ ಬಾಗೇವಾಡಿ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಿದ್ದಾರೆ.
ಗೋಕಾಕ್ ಸಿಪಿಐ ಸುರೇಶ ಆರ್.ಬಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅನಗತ್ಯ ಸಾರ್ವಜನಿಕರನ್ನು ಭೇಟಿಯಾಗದಂತೆ ಸೋಫಿಯಾ ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಮನೆ ಬಳಿಯಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.