ಕೊಪ್ಪಳ:- ಟಾಟಾ ಏಸ್ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಕ್ರಾಸ್ ಬಳಿ ನಡೆದಿದೆ.
ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಟಾಟಾ ಏಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬರಗೂರು ಕ್ರಾಸ್ ಬಳಿ ವಾಹನ ಪಲ್ಟಿಯಾಗಿದೆ. ಘಟನೆ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದು, 28 ಜನರಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನ ಹುಬ್ಬಳ್ಳಿ ಹಾಗೂ ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇನ್ನುಳಿದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ.
ವಿಷಯ ತಿಳಿದು ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.