ಬೆಂಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಪಾಪಿ ಪಾಕಿಸ್ತಾನ ವಿರುದ್ಧ ನಡೆದ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಕಳೆದ ವಾರ ಕಾಂಗ್ರೆಸ್ ಬೆಂಗಳೂರಿನಲ್ಲಿ ಅದ್ದೂರಿ ತಿರಂಗಾ ಯಾತ್ರೆ ನಡೆಸಿತ್ತು.
ಇಂದು ಭಾರತೀಯ ಸೇನೆ ಬೆಂಬಲಿಸಿ ಬಿಜೆಪಿಯಿಂದಲೂ ತಿರಂಗಾ ಯಾತ್ರೆ ನಡೆಸಲಾಗುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂನ ಶಿರೂರೂ ಪಾರ್ಕ್ ನಿಂದ ತಿರಂಗಾಯಾತ್ರೆ ಆರಂಭವಾಗಿದ್ದು, ಕಾಲೇಜು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಸಾರ್ವಜನಿಕರು, ವಿವಿಧ ಸಂಘಟನೆಯವರು ಭಾಗಿಯಾಗಿದ್ದಾರೆ.
ಆಪರೇಷನ್ ಸಿಂದೂರ್ ಎಂಬ ಟೋಪಿ ಧರಿಸಿ, ರಾಷ್ಟ್ರಧ್ವಜ ಹಿಡಿದು ವಂದೇ ಮಾತರಂ ಗೀತೆಯ ಮೂಲಕ ತಿರಂಗ ಯಾತ್ರೆ ಪ್ರಾರಂಭವಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ ವಾಲ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಶಾಸಕ ಅಶ್ವಥ್ ನಾರಾಯಣ್, ಪರಿಷತ್ ಸದಸ್ಯರಾದ ಎನ್ ರವಿಕುಮಾರ್, ಸಿಟಿ ರವಿ, ಶಾಸಕರಾದ ಗೋಪಾಲಯ್ಯ, ಭೈರತಿ ಬಸವರಾಜ್, ಮುನಿರತ್ನ ಸೇರಿ ಹಲವು ನಾಯಕರು ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಮಹಾತ್ಮ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಯತ್ನಾಳ ವಿರುದ್ಧ ದಾಖಲಾಯ್ತು FIR!
ತಿರಂಗಾ ಯಾತ್ರೆ ವೇಳೆ 9 ಅಡಿ ಅಗಲ, 1500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಸಂಪಿಗೆ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗಿದ್ದು ಜನರ ಗಮನ ಸೆಳೆಯಿತು. ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದವರಿಗೆ ಮಲ್ಲೇಶ್ವರಂ ಸಂಪಿಗೆ ರಸ್ತೆಯ ವ್ಯಾಪರಿಗಳಿಂದ ರಸ್ತೆ ಬದಿಗಳಲ್ಲಿ ಮಜ್ಜಿಗೆ, ನೀರಿನ ಬಾಟಲಿ ವಿತರಣೆ ಮಾಡಲಾಯಿತು.
ಸೈನಿಕ ವೇಷಧಾರಿಯಾಗಿ ಕೈಯಲ್ಲಿ ಬಂದೂಕು ಹಿಡಿದು ನಿಂತಿರುವ ಮೋದಿ ಕಟೌಟ್ ಹಾಕಲಾಗಿದೆ. ತಿರಂಗಾಯಾತ್ರೆಯುದ್ದಕೂ ದೇಶಭಕ್ತಿ ಹಾಡುಗಳು ಮೊಳಗಿದವು. ತಿರಂಗಾಯಾತ್ರೆ ಮಲ್ಲೇಶ್ವರಂನ 18ನೇ ಕ್ರಾಸ್ ನಲ್ಲಿ ಕೊನೆಗೊಂಡಿತು.