ಬೆಂಗಳೂರು: ಪ್ರಧಾನಿ ಮೋದಿ ತಾವೇ ಸುಪ್ರೀಂ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಏಪ್ರಿಲ್ 22 ರಂದು ಪ್ರಧಾನಿ ನರೇಂದ್ರ ಮೋದಿ ಸೌದಿಯಿಂದ ವಾಪಸ್ ಬರ್ತಾರೆ. ಆದರೆ ಪತ್ರಿಕಾಗೋಷ್ಠಿ ನಡೆಸಲ್ಲ, ಬದಲಾಗಿ ಬಿಹಾರ ಚುನಾವಣಾ ಪ್ರಚಾರಕ್ಕೆ ಹೋಗ್ತಾರೆ.
ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು
ಆಲ್ ಪಾರ್ಟಿ ಸಭೆಗೂ ಗೈರಾಗಿದ್ದಾರೆ. ನಾನು ಸುಪ್ರೀಂ, ಯಾವ ಸಭೆಗೆ ಭಾಗಿಯಾಗಲ್ಲ ಎಂಬ ಸಂದೇಶವೇ? ಯಾವ ಸಂದೇಶವನ್ನು ಪ್ರಧಾನಿ ಮೋದಿ ಕೊಡಲು ಹೊರಟಿದ್ದಾರೆ ಎಂದು ಪ್ರಶ್ನಿಸಿದರು. ರೆಕಾರ್ಡ್ ಆಗಿರುವ ವಿಡಿಯೋವನ್ನು ಪ್ರಸಾರ ಮಾಡಲಾಗ್ತಿದೆ. ಅದನ್ನು ದೇಶದ ಜನರು ನೋಡಬೇಕಾದ ಸ್ಥಿತಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.