ಶ್ರೀನಗರ: ಆಪರೇಷನ್ ಸಿಂಧೂರ್ ಕೇವಲ ಟ್ರೇಲರ್, ಸಮಯ ಬಂದಾಗ ಪಾಕ್ಗೆ ಪೂರ್ಣ ಚಿತ್ರ ತೋರಿಸ್ತೀವಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಗುಜರಾತ್ನ ಭುಜ್ ವಾಯುನೆಲೆಗೆ ಭೇಟಿ ನೀಡಿ ಭಾರತೀಯ ವಾಯುಪಡೆಯನ್ನುದ್ದೇಶಿಸಿ ಮಾತನಾಡಿದ ಅವರು, ಕದನ ವಿರಾಮದ ಬಳಿಕ ನಾವು ಪಾಕಿಸ್ತಾನದ ನಡವಳಿಕೆಯನ್ನು ಪರೀಕ್ಷಿಸುತ್ತಿದ್ದೇವೆ.
ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!
ಅವರ ನಡವಳಿಕೆಯಲ್ಲಿ ಏನಾದರೂ ಸುಧಾರಣೆಯಾದರೆ ಸರಿ, ಇಲ್ಲವಾದರೆ ತಕ್ಕ ಪಾಠ ಕಲಿಸುತ್ತೇವೆ. `ಆಪರೇಷನ್ ಸಿಂಧೂರ’ ಇನ್ನೂ ಮುಗಿದಿಲ್ಲ. ಈಗ ನಡೆದಿದ್ದು ಟ್ರೇಲರ್ ಅಷ್ಟೇ. ಸರಿಯಾದ ಸಮಯ ಬಂದಾಗ ಜಗತ್ತಿಗೆ ಸಿನಿಮಾವನ್ನು ತೋರಿಸುತ್ತೇವೆ ಎಂದರು.
1965 ಮತ್ತು 1971ರಲ್ಲಿ ಭುಜ್ ವಾಯುನೆಲೆ ಪಾಕಿಸ್ತಾನ ವಿರುದ್ಧದ ಭಾರತದ ಗೆಲುವಿಗೆ ಸಾಕ್ಷಿಯಾಗಿತ್ತು. ಇಂದು ಅದೇ ಭುಜ್ ನೆಲೆ ಮತ್ತೆ ಪಾಕಿಸ್ತಾನ ವಿರುದ್ಧದ ನಮ್ಮ ಗೆಲುವಿಗೆ ಸಾಕ್ಷಿಯಾಗಿದೆ. ಇಂದು ನಾನು ಇಲ್ಲಿರುವುದು ನನಗೆ ಹೆಮ್ಮೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಇಡೀ ಭಾರತೀಯರು ಹೆಮ್ಮೆಪಡುವಂತಹ ವಿಷಯವಾಗಿದೆ ಎಂದರು.