ಮೈಸೂರು: ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,
ಯುದ್ಧ ಕ್ರೆಡಿಟ್ ಸೈನಿಕರಿಗೆ ಸಿಗಬೇಕು. ಆದರೆ, ಜನ ಮೋದಿಯಂಥ ಗಟ್ಟಿ ನಾಯಕತ್ವಕ್ಕೆ ಅದರ ಕ್ರೆಡಿಟ್ ಕೊಡ್ತಿದ್ದಾರೆ ಅಷ್ಟೇ. ಹಿಂದೆ ಇಂದಿರಾ ಗಾಂಧಿಗೂ ಕ್ರೆಡಿಟ್ ಕೊಡಲಿಲ್ವಾ? ಇಂದಿರಾ ಗಾಂಧಿ ಸಮಯದಲ್ಲಿ ಯುದ್ಧ ಸೋತಾಗ ಇಂದಿರಾ ಗಾಂಧಿನ ಬೈಯಲಿಲ್ವಾ? ಇದೆಲ್ಲಾ ಜನ ಕೊಡುವ ಕ್ರೆಡಿಟ್ಗಳು. ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!
ಮುಂಬೈ ದಾಳಿಯಾದಾಗ ಅವತ್ತಿನ ಯುಪಿ ಸರ್ಕಾರ ಯಾಕೆ ದಾಳಿ ಮಾಡಲಿಲ್ಲ? ಇವತ್ತು ಸೈನಿಕರಿಗೆ ಸ್ವಾತಂತ್ರ್ಯ ಆ ಶಕ್ತಿಯನ್ನ ಮೋದಿ ಕೊಟ್ಟಿದ್ದಾರೆ. ಅದೇ ನಿಜವಾದ ನಾಯಕತ್ವ. ನೀವು ಮಾಡಲು ಆಗದ್ದನ್ನು ಮೋದಿ ಮಾಡಿದ್ದಾರೆ ಅಷ್ಟೇ ಎಂದು ಗುಡುಗಿದರು.