ಬೆಂಗಳೂರು:- ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!
ಎಸ್, ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಫಲಿತಾಂಶ ಪೂರ್ಣಗೊಂಡಿರದ 1,53,620 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದರು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಏಪ್ರಿಲ್ 24ರಿಂದ ಮೇ 8ರವರೆಗೆ ನಡೆದಿದ್ದ ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು. 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರ್ಣಾಗಿದ್ದಾರೆ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದ 71,964 ವಿದ್ಯಾರ್ಥಿಗಳು ಪರೀಕ್ಷೆ-2 ಅನ್ನೂ ಬರೆದಿದ್ದಾರೆ. ಇವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.
ಜೂನ್ 9ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ-3 ನಡೆಯಲಿದೆ. ದ್ವಿತೀಯ ಪಿಯು ಪರೀಕ್ಷೆ-3 ತೆಗೆದುಕೊಳ್ಳುವವರಿಗೂ ಕೂಡ ಶುಲ್ಕ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.