ಬೆಂಗಳೂರು: ಕುಮಾರಸ್ವಾಮಿಯವರ ನಿರ್ಧಾರ ಏನಿತ್ತೋ ಅದನ್ನು ನಾವು ಮುಂದುವರೆಸುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ನಿರ್ಧಾರ ಏನಿತ್ತೋ ಅದನ್ನು ನಾವು ಮುಂದುವರೆಸುತ್ತಿದ್ದೇವೆ.
ಗರ್ಭಿಣಿಯರು ಪಾನೀಪುರಿ ತಿನ್ನುವುದು ಒಳ್ಳೆಯದೋ, ಕೆಟ್ಟದ್ದೋ..? ಇಲ್ಲಿದೆ ಮಾಹಿತಿ
ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಹಾಗೂ ನಮ್ಮ ಪಕ್ಷದ ಉದ್ದೇಶ ಕೂಡ ಇದಾಗಿದೆ ಎಂದು ಡಿಕೆ ಸುರೇಶ್, ಕೇಂದ್ರ ಭಾರೀ ಕೈಗಾರಿಕೆ ಖಾತೆಯ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಕಾಲೆಳೆದರು.
ಹಾಲಿನ ವ್ಯವಸ್ಥೆಯಲ್ಲಿ ರಾಜಕೀಯ ಪ್ರವೇಶವಾದರೆ ರೈತರ ಬದುಕಿಗೆ ಪೆಟ್ಟು ನೀಡುತ್ತದೆ. ಹೀಗಾಗಿ ಇಲ್ಲಿ ರಾಜಕೀಯ ಬೆರೆಸದೆ ಸರ್ಕಾರದ ಜತೆ ಹೊಂದಾಣಿಕೆ ಮಾಡಿಕೊಂಡು ರೈತರ ಪರವಾಗಿ ಕೆಲಸ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚುನಾವಣೆ ಗೆದ್ದ ಬಳಿಕ ನಮ್ಮ ಆಡಳಿತ ಮಂಡಳಿ ನಿರ್ದೇಶಕರು ಕೆಲಸ ಮಾಡಲಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.