ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದ ಪ್ರತಿಷ್ಟಿತ ಜಿ.ಎಸ್ ಸೂಟ್ ಹೋಟೆಲ್ ಸೀಜ್ ಮಾಡಲಾಗಿದೆ. ಕನ್ನಡಿಗರಿಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೇ ಹೋಟೆಲ್ ಮ್ಯಾನೇಜರ್ ನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಮ್ಯಾನೇಜರ್ ಅನ್ನು ಸರ್ಫಜ್ ಎಂದು ಗುರುತಿಸಲಾಗಿದೆ
ಹುಬ್ಬಳ್ಳಿಯಲ್ಲಿ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!
ಮ್ಯಾನೇಜರ್ ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ ಮಡಿವಾಳ ಪೊಲೀಸರು ಬೀಗ ಹಾಕಿದ್ದಾರೆ. ಹೊಟೇಲ್ ಮಾಲೀಕ ಜಮ್‌ಶದ್ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಹೋಟೆಲ್ ಮಾಲೀಕ ಕೇರಳದಲ್ಲಿದ್ದಾರೆ.
ಜಿ.ಎಸ್ ಸೂಟ್ ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಲಾಗಿತ್ತು. ಸ್ಥಳೀಯರು ಅದನ್ನು ಗಮನಿಸಿ ವೀಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದರು. ಹೋಟೆಲ್‌ನ ಈ ನಡೆಗೆ ಕನ್ನಡಿಗರು ಅಸಮಾಧಾನ ಹೊರಹಾಕಿದ್ದರು.
ಸಧ್ಯ ಹೋಟೆಲ್ ಮಾಲೀಕ ಕೇರಳದಲ್ಲಿದ್ದು, ಶೀಘ್ರದಲ್ಲೇ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.