ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಬಂದಿರೋದು ಚಿರತೆ ಅಲ್ಲಾ ಅದು ಕಾಡು ಬೆಕ್ಕು; ಉಪವಲಯ ಅರಣ್ಯ ಅಧಿಕಾರಿ ರಂಗಪ್ಪ ಕೆ ಕೋಳಿ ಸ್ಪಷ್ಟ!
ಈ ಪತ್ರಿಕಾ ಹೇಳಿಕೆ ನೀಡಿರುವ ಅವರು, ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧೀ, ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಎಲ್ಲ ಸಚಿವರು, ಶಾಸಕರು, ಮುಖಂಡರು, 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕಾರ್ಯಕ್ರಮದ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ ಎಂದಿದ್ದಾರೆ.