ಬೆಂಗಳೂರು:- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 92ನೇ ವರ್ಷದ ಬರ್ತಡೇ ಸೆಲೆಬ್ರೇಷನ್ ನಲ್ಲಿರುವ ದೇವೇಗೌಡರಿಗೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಮಳೆಗಾಹುತಿಯಾದ RCB ಮ್ಯಾಚ್: ವೈಟ್ ಜರ್ಸಿಯಲ್ಲಿ ಮಿಂದೆದ್ದ ಫ್ಯಾನ್ಸ್.. ಭಾವುಕರಾದ ವಿರಾಟ್ ಕೊಹ್ಲಿ!
ನರೇಂದ್ರ ಮೋದಿ:-
ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಗಾಗಿ ಹೆಚ್‌ಡಿಡಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಹಾರೈಸುತ್ತೇನೆಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ:-
ನನ್ನ ಪೂಜ್ಯ ತಂದೆಯವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಮಣ್ಣಿನಮಗ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಜನ್ಮಜನ್ಮದ ಸುಕೃತ. ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ:-
ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.