ನೆದರ್ಲ್ಯಾಂಡ್‌ನಲ್ಲಿ ನಡೆಯುತ್ತಿರುವ ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟಗೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದೆ.
ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಗುಜರಾತ್: ಪ್ಲೇ ಆಫ್ ಗೆ RCB, ಪಂಜಾಬ್, ಜಿಟಿ ಎಂಟ್ರಿ!
ಅಜಿತ್ ಕಾರಿನ ಟೈರ್ ಸಿಡಿದಾಗ, ಅವರು ತಕ್ಷಣ ಟ್ರ್ಯಾಕ್ ನಿಂದ ಹೊರಬಂದು ಕಾರನ್ನು ನಿಧಾನವಾಗಿ ತೆಗೆದುಕೊಂಡು ಹೋಗಿದ್ದಾರೆ. ಟೈರ್ ಸ್ಫೋಟದಿಂದ ಕಾರಿನ ಮುಂಭಾಗವೂ ಹಾನಿಗೊಳಗಾಗಿದೆ.
ಇನ್ನೂ ಇದೇ ವರ್ಷ ಫೆಬ್ರವರಿಯಲ್ಲಿ ಸ್ಪೇನ್‌ನಲ್ಲಿ ನಡೆದ ರೇಸ್‌ನಲ್ಲಿ ನಟ ಅಜಿತ್ ಕುಮಾರ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಸ್ಪೇನ್‌ನ ವೇಲೆನ್ಸಿಯಾದಲ್ಲಿ ನಡೆದ ರೇಸ್‌ನಲ್ಲಿ ಅಜಿತ್ ಭಾಗವಹಿಸಿದ್ದರು. ಈ ವೇಳೆ ಅವರ ಕಾರು ಇನ್ನೊಂದು ಕಾರಿಗೆ ಹಿಂಭಾಗದಿಂದ ಡಿಕ್ಕಿಯಾಗಿ, ಹಲವಾರು ಬಾರಿ ಪಲ್ಟಿಯಾಗಿ ನಿಂತಿತ್ತು. ಈ ಅಪಘಾತದ ವೀಡಿಯೊವನ್ನು ಅಜಿತ್ ಅವರ ವ್ಯವಸ್ಥಾಪಕ ಸುರೇಶ್ ಚಂದ್ರ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು.