ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಹಾಗೂ ಇಂದು ನಸುಕಿನ ಜಾವ ಸುರಿಯುತ್ತಿರುವ ಭಾರೀ ಮಳೆಗೆ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅದರಂತೆ ಮಳೆ ನೀರಿನ ಹೊಳೆತಕ್ಕೆ ಸಿಸಿಬಿ ಕಚೇರಿ ಮುಳುಗಡೆ ಆಗಿದೆ.
ಕಚೇರಿ ಆವರಣದಲ್ಲಿ ಕೆರೆಯಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಕಚೇರಿ ಮುಂಭಾಗದ ರಸ್ತೆ ತುಂಬಾ ಚರಂಡಿ ನೀರು ಮತ್ತು ಮೋರಿ ನೀರು ನಿಂತಿದೆ. ಸಿಸಿಬಿ ಕಛೇರಿ ಒಳಗಡೆ ಮಳೆ ನೀರು ನುಗ್ಗಿದ್ದು, ಗ್ರೌಂಡ್ ಫ್ಲೋರ್ ನಲ್ಲಿ ಮಳೆ ನೀರು ನುಗ್ಗಿ ದಾಖಲೆಗಳು ಹಾನಿಯಾಗಿದೆ.
ಬೆಂಗಳೂರಿನಲ್ಲಿ ಮಳೆ ಆರ್ಭಟ: ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು, ಸಿಟಿ ಮಂದಿ ಹೈರಾಣು!
ಗ್ರೌಂಡ್ ಫ್ಲೋರ್ ನಲ್ಲಿ ರುವ ಸುಮಾರು 8 ಕ್ಕೂ ಹೆಚ್ಚು ರೋಮ್ ಗಳಲ್ಲಿರೋ ಕೇಸ್ ಫೈಲ್ ಗಳ ನಾಶವಾಗಿದೆ. ಇನ್ನೂ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದೆ. ಭಾನುವಾರ ಸಂಜೆ ಹಾಗೂ ರಾತ್ರಿ ಕೂಡ ಚಾಮರಾಜಪೇಟೆ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅಷ್ಟೇ ಅಲ್ಲದೆ, ರಾತ್ರಿಯಿಡೀ ಮಳೆ ಸುರಿದಿದೆ. ಶನಿವಾರ ರಾತ್ರಿ ಸುರಿದಿದ್ದ ಮಳೆಗೆ ರಸ್ತೆಗಳಲ್ಲಿ ಗುಂಡಿಗಳು ಬಾಯ್ತೆರೆದಿದ್ದವು. ಗ್ರೇಟರ್ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳದ್ದೇ ದರ್ಬಾರ್ ಆಗಿದ್ದು, ಕಿತ್ತುಹೋಗಿರುವ ರಸ್ತೆಗಳನ್ನು ಸರಿಪಡಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಇದರ ಮಧ್ಯೆ ಇದೀಗ ಭಾನುವಾರ ರಾತ್ರಿ ಇಡೀ ಸುರಿದ ಮಳೆ ಮತ್ತಷ್ಟು ಅಧ್ವಾನ ಮಾಡಿಹಾಕಿದೆ. ಹೆಬ್ಬಾಳ, ಗೊರಗುಂಟೆಪಾಳ್ಯ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡು ಸಂಚಾರ ಕಷ್ಟವಾಗಿದೆ.