ಮೈಸೂರು: ಮೈಸೂರಿನ ಹುಣಸೂರು ತಾಲೂಕು ಕೊಳಘಟ್ಟ ಗ್ರಾಮದಲ್ಲಿ ಜಟಿಜಟಿ ಮಳೆ ಎಫೆಕ್ಟ್ʼನಿಂದ ಮನೆ ಗೋಡೆ ಕುಸಿದು ಬಿದ್ದಿದೆ. ಸದ್ಯ ಕುಟುಂಬಸ್ಥರು ಅಪಾಯದಿಂದ ಪಾರಾಗಿದ್ದು, ರಾತ್ರಿಯಿಡೀ ಸುರಿದ ಮಳೆಗೆ ಮನೆ ಗೋಡಿ, ಮೇಲ್ಛಾವಣಿ ಕುಸಿತಗೊಂಡಿದೆ.
ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!
ಕರಗಮ್ಮ ಎಂಬುವರಿಗೆ ಸೇರಿದ ಮನೆಯಾಗಿದ್ದು, ಮಲಗಿದ್ದ ವೇಳೆ ಮಧ್ಯರಾತ್ರಿಯಲ್ಲಿ ಗೋಡೆ ಕುಸಿತಗೊಂಡಿದೆ. ಮನೆಯವರು ಹೊರ ಬರುತ್ತಿದ್ದಂತೆ ಮೇಲ್ಛಾವಣಿ ಕುಸಿದಿದೆ. ಆದರೆ ಮನೆಯಲ್ಲಿದ್ದ ಧವಸ ಧಾನ್ಯಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸದ್ಯ ಪರಿಹಾರ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.