ಚಾಲೆಂಜಿಂಗ್ ಸ್ಟಾರ್ ಹಾಗೂ ವಿಜಯಲಕ್ಷ್ಮಿ ದಂಪತಿ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಇಂದು ದಚ್ಚು ಹಾಗೂ ವಿಜಿ ಜೋಡಿ 22ನೇ ವೆಡ್ಡಿಂಗ್ ಅನಿವರ್ಸರಿ ಆಚರಿಸಿಕೊಳ್ಳುತ್ತಿದ್ದಾರೆ. ಬಾಲಿಯಲ್ಲಿ ವಾರ್ಷಿಕೋತ್ಸವ ಆಚರಿಸಿಕೊಂಡಿರುವ ದಂಪತಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.
ದರ್ಶನ್ ಪತ್ನಿ ಇಷ್ಟದ ಹಾಡು ಮುದ್ದು ರಾಕ್ಷಸಿ ಹಾಡಿಗೆ ಸ್ಟೆಪ್ಸ್ ಹಾಕಿದ್ದು, ವಿಡಿಯೋ ವೈರಲ್ ಆಗಿದೆ. ಅಲ್ಲದೇ ಹಾಡು ಹಾಡಿ ದಾಸ ಫುಲ್ ಜಾಲಿ ಮೂಡ್ಗೆ ಜಾರಿದ್ದಾರೆ.
ನಟ ಚಿಕ್ಕಣ್ಣ ಸೇರಿದಂತೆ ಆಪ್ತ ಬಳಗದ ಜೊತೆ ವೆಡ್ಡಿಂಗ್ ಆನಿವರ್ಸರಿ ಆಚರಿಸಿಕೊಂಡಿದ್ದಾರೆ.ಕಳೆದ ವರ್ಷ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ದಂಪತಿ ದುಬೈನಲ್ಲಿ ಬಹಳ ಅದ್ಧುರಿಯಾಗಿ ತಮ್ಮ 21ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇದೀಗ ಆಪ್ತರು ಹಾಗೂ ಪತ್ನಿ ಜೊತೆ ಬಾಲಿಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಾರ್ಟಿ ಮೂಡ್ನಲ್ಲಿದ್ದಾರೆ .