ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ದ್ವಾರಪುಡಿ ಗ್ರಾಮದಲ್ಲಿ ಲಾಕ್ ಮಾಡಿದ ಕಾರಿನೊಳಗೆ ಸಿಲುಕಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ದ್ವಾರಪುಡಿ ಗ್ರಾಮದ ಮಂಗಿ ಉದಯ್ (8), ಬುರ್ಲೆ ಚಾರುಮತಿ (8), ಬುರ್ಲೆ ಚರಿಷ್ಮಾ (6) ಮತ್ತು ಕಂಡಿ ಮನಸ್ವಿನಿ (6) ಮೃತ ಮಕ್ಕಳು ದ್ವಾರಪುಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕಾರು ನಿಲ್ಲಿಸಿ, ಲಾಕ್ ಮಾಡುವುದನ್ನೇ ಮರೆತು ಹೋಗಿದ್ದ.
ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!
ಅಲ್ಲೇ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಮಳೆಯಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲೇ ನಿಲ್ಲಿಸಿದ್ದ ಕಾರನ್ನು ಹತ್ತಿದ್ದಾರೆ. ದುರಾದೃಷ್ಟವಶಾತ್, ಕಾರಿನ ಬಾಗಿಲು ಆಕಸ್ಮಿಕವಾಗಿ ಲಾಕ್ ಆಗಿ, ನಾಲ್ವರು ಮಕ್ಕಳು ಕಾರಿನಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಮಕ್ಕಳಿಗಾಗಿ ಮನೆಯವರು ಸುಮಾರು 3 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದರು. ಕೊನೆಗೆ ಅಲ್ಲೇ ನಿಲ್ಲಿಸಿದ್ದ ಕಾರನ್ನು ಗಮನಿಸಿದಾಗ ಮಕ್ಕಳು ಕಾರಿನೊಳಗೆ ಸಿಲುಕಿರುವುದು ಪತ್ತೆಯಾಗಿದೆ. ತಕ್ಷಣವೇ ಕಾರಿನ ಗ್ಲಾಸ್ ಒಡೆದು ಮನೆಯವರು ಮಕ್ಕಳನ್ನು ಹೊರೆತೆಗೆದರು. ಅಷ್ಟರಲ್ಲಾಗಲೇ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದರು.