ಬೆಂಗಳೂರು: ರಾಜ್ಯ ಸರ್ಕಾರ ರೈತರಿಗೆ, ಮಹಿಳೆಯರಿಗೆ, ಯುವಕರಿಗೆ ಯಾವುದೇ ಹೊಸ ಯೋಜನೆ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಯಾವುದೇ ಹೊಸ ಯೋಜನೆ ನೀಡಲು ಸಾಧ್ಯವಾಗಿಲ್ಲ. ಮಹಿಳೆಯರಿಗೆ ಯಾವುದೇ ಅಭಿವೃದ್ಧಿ ಯೋಜನೆ ಪ್ರಕಟಿಸಿಲ್ಲ,
ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!
ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿ ಸ್ವಾಭಿಮಾನದ ಬದುಕನ್ನು ನೀಡಿಲ್ಲ. ಗ್ರೇಟರ್ ಬೆಂಗಳೂರು ಇವತ್ತು ವಾಟರ್ ಬೆಂಗಳೂರಾಗಿದೆ. ಸ್ವಲ್ಪ ಮಳೆಯಾದರೂ ಬೆಂಗಳೂರು ಮಹಾನಗರ ನೀರಿನಲ್ಲಿ ಮುಳುಗುವಂತಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನೂ ಅಭಿವೃದ್ಧಿ ಎಂಬುದು ಸಂಪೂರ್ಣವಾಗಿ ನಿಂತು ಹೋಗಿದೆ. ಎರಡು ವರ್ಷದಲ್ಲಿ ಏನು ಮಾಡಿದ್ದಾರೆ?. ಆಡಳಿತ ಪಕ್ಷದ ಶಾಸಕರು ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಬೇಸತ್ತಿರುವುದು ಜಗಜ್ಜಾಹೀರಾಗಿದೆ. ಮೊದಲ ಬಾರಿ ಗೆದ್ದ ಶಾಸಕರಾದ ನಾವು ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಶಾಲಾ ಕೊಠಡಿ ಕಟ್ಟಿಸಲೂ ಸಾಧ್ಯವಾಗುತ್ತಿಲ್ಲ ಎಂದರು.