ರಾಮನಗರ:- ಬಿಡದಿ ದಿವ್ಯಾಂಗ ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಾವೇನು ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂದಿದ್ದೇವಾ!? ಉಲ್ಟಾ ಮಾತಾಡಿದ ಡಿಕೆಶಿ!
ಈ ಸಂಬಂಧ ನಗರದಲ್ಲಿ ಲ ಮಾತನಾಡಿದ ಅವರು, ಬಾಲಕಿ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿದೆ. ಹೆಡ್ ಇಂಜೂರಿಯಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖವಾಗದೆ. ಎಫ್‌ಎಸ್‌ಎಲ್, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ವಿಡಿಯೋ ಪಡೆದುಕೊಂಡಿದ್ದೇವೆ. ಎರಡು ಸಿಸಿ ಕ್ಯಾಮರಾದಲ್ಲಿ ಬಾಲಕಿಯ ಚಲನವಲನ ಕಂಡು ಬಂದಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಿದಾಗ ರೈಲ್ವೆ ಅಪಘಾತ ಎಂಬುದು ಕಂಡುಬಂದಿದೆ. 6 ಗಂಟೆ 7 ನಿಮಿಷದಿಂದ 6 ಗಂಟೆ 8 ನಿಮಿಷದ ಮಧ್ಯೆ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದರು.
ರೈಲ್ವೆ ಇಲಾಖೆಯ ಸಿಸಿ ಕ್ಯಾಮರಾದ ಕಂಪ್ಲೀಟ್ ಬ್ಯಾಕಪ್ ಸಹ ಪಡೆದಿದ್ದೇವೆ. ರೈಲಿನಲ್ಲೂ ಪರಿಶೀಲನೆ ಮಾಡಿ ಸ್ಯಾಂಪಲ್ಸ್ ಸಂಗ್ರಹಿಸಿದ್ದೇವೆ, FSLಗೆ ಕಳಿಸುತ್ತೇವೆ. ವರದಿ ಬರುವ ಮುನ್ನ ಸೋಶಿಯಲ್ ಮೀಡಿಯಾಗಳಲ್ಲಿ ತಪ್ಪು ಮಾಹಿತಿ ಹರಡಿದ್ರು. ಇದೆಲ್ಲವೂ ಸುಳ್ಳು, ಇನ್ನಷ್ಟು ಅನುಮಾನಗಳ ಬಗ್ಗೆಯೂ ತನಿಖೆ ಮಾಡುತ್ತೇವೆ. ದಿವ್ಯಾಂಗ ಬಾಲಕಿಯ ಸಾವಿನ ಬಗ್ಗೆ ಇನ್ನೂ ತನಿಖೆ ಮುಂದುವರಿಸಿದ್ದೇವೆ ಎಂದು ರಾಮನಗರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.