ಲಕ್ನೋ ಸೂಪರ್ ಜೈಂಟ್ಸ್ 18ನೇ ಆವೃತ್ತಿಯ ಐಪಿಎಲ್‌ನ ಪ್ಲೇ ಆಫ್‌ರೇಸ್‌ನಿಂದಲೇ ಹೊರಬಿದ್ದಿದೆ. ಅಭಿಷೇಕ್ ಶರ್ಮಾ ಸ್ಫೋಟಕ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ 200+ ರನ್ ಚೇಸಿಂಗ್ ಮಾಡಿ ಐತಿಹಾಸಿಕ ಗೆಲುವು ದಾಖಲಿಸಿದೆ.
ಈ ರಾಶಿಯ ಆಸ್ತಿ ಮಾರಾಟದಲ್ಲಿ ಅಡೆತಡೆ ಮತ್ತು ವಿಳಂಬ: ಮಂಗಳವಾರದ ರಾಶಿ ಭವಿಷ್ಯ20 ಮೇ 2025
ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರಂಭಿಕ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. 206 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ 18.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 2೦6 ರನ್ ಗಳಿಸಿ ಗೆಲುವು ಸಾಧಿಸಿತು.
ಸನ್ ರೈಸರ್ಸ್ ಪರ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ 6 ಸಿಕ್ಸರ್, 4 ಬೌಂಡರಿ ನೆರವಿಂದ 59 ರನ್, ಇಶನ್ ಕಿಶನ್ 28 ಎಸೆತಗಳಲ್ಲಿ 35 ರನ್, ಹೆನ್ರಿಕ್ ಕ್ಲಾಸೆನ್ 28 ಎಸೆತಗಳಲ್ಲಿ 47 ರನ್ ಗಳಿಸಿ ತಂಡಕ್ಕೆ ಕೊಡುಗೆ ಕೊಟ್ಟರು. ಕಮಿಂಡು ಮೆಂಡಿಸ್ 21 ಎಸೆತಗಳಲ್ಲಿ 32 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅಥರ್ವ 13 ರನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ ತಲಾ 5 ರನ್ ಗಳಿಸಿ ತಂಡದ ಗೆಲುವಿಗೆ ಸಹಕರಿಸಿದರು.