ತಮಿಳು ನಟ ವಿಶಾಲ್ ಕೊನೆಗೂ ಹುಡುಗಿ ಸಿಕ್ಕಿದ್ದಾಳೆ. ಶೀಘ್ರದಲ್ಲೇ ಸಾಯಿ ಧನ್ಸಿಕಾ ಜೊತೆ ಹಸಮಣೆ ಏರಲಿದ್ದಾರೆ. ನಟ ವಿಶಾಲ್ ಮತ್ತು ನಟಿ ಸಾಯಿ ಧನ್ಶಿಕಾ ಕಳೆದ ಕೆಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಸ್ನೇಹದಿಂದ ಆರಂಭವಾದ ಅವರ ನಂಟು ಪ್ರೀತಿಯಾಗಿ ಬದಲಾಗಿತ್ತು ಎಂದು ವರದಿಯಾಗಿದೆ.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ನಡಿಗರ್ ಸಂಘದ (ತಮಿಳು ಚಲನಚಿತ್ರ ನಟರ ಸಂಘ) ಭಾಗವಾಗಿರುವ ವಿಶಾಲ್, 9 ವರ್ಷಗಳ ಹಿಂದೆ ನಿಧಿ ಸಂಗ್ರಹಿಸಿ ನಡಿಗರ್ ಸಂಘದ ಕಟ್ಟಡ ನಿರ್ಮಾಣ ಪೂರ್ಣ ಆದ್ಮೇಲೆ ಮದುವೆ ಆಗೋದಾಗಿ ಘೋಷಿಸಿದ್ದರು. ಕೆಲವು ದಿನಗಳ ಹಿಂದೆ ಸಂದರ್ಶನದಲ್ಲಿ, ನಡಿಗರ್ ಸಂಘದ ಕಟ್ಟಡವು ಈಗ ಪೂರ್ಣಗೊಳ್ಳುತ್ತಿದೆ. ನಿಮ್ಮ ಮದುವೆಯ ಕತೆ ಏನು? ಎಂಬ ಪ್ರಶ್ನೆ ಕೇಳಲಾಗಿತ್ತು.
ಈ ಪ್ರಶ್ನೆಗೆ ವಿಶಾಲ್, ಹೌದು, ನನ್ನ ಸಂಗಾತಿಯನ್ನು ನಾನು ಹುಡುಕಿಕೊಂಡಿದ್ದೇನೆ. ಮದುವೆಯ ಬಗ್ಗೆ ಮಾತುಕತೆ ನಡೆಸಿದ್ದೇವೆ. ವಧುವಿನ ವಿವರಗಳು ಮತ್ತು ವಿವಾಹದ ದಿನಾಂಕದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದಿದ್ದರು.
ಸಾಯಿ ಧನ್ಶಿಕಾ ಅವರು ನಟಿಸಿರುವ ಹೊಸ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ವಿಶಾಲ್ ಅವರೇ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಅದನ್ನು ಸ್ವತಃ ಸಾಯಿ ಧನ್ಶಿಕಾ ಅವರೇ ಸ್ಪಷ್ಟಪಡಿಸಿದ್ದಾರೆ. ಈ ವೇದಿಕೆಯಲ್ಲಿ ವಿಶಾಲ್ ಅವರು ತಮ್ಮ ಪ್ರೀತಿ ಮತ್ತು ಮದುವೆ ಬಗ್ಗೆ ಮಾಹಿತಿ ಬಿಟ್ಟುಕೊಡುವ ಸಾಧ್ಯತೆ ಇದೆ ಎಂದು ಫ್ಯಾನ್ಸ್ ನಿರೀಕ್ಷಿಸಿದ್ದಾರೆ.