ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ತೂಗುದೀಪ್ ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಇಂದು ಮತ್ತೆ ನಗರದ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಲಿದ್ದಾರೆ.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಎಲ್ಲರೂ ಕೋರ್ಟ್ಗೆ ಹಾಜರಾಗುತ್ತಿದ್ದಾರೆ.
ಈಗಾಗಲೇ ದೇಶಾದ್ಯಂತ ಸಂಚರಿಸಲು ಅನುಮತಿಯನ್ನು ಪಡೆದಿರುವ ದರ್ಶನ್ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಇನ್ನೂ ನಿನ್ನೆಯಷ್ಟೆ ದರ್ಶನ್ ಮತ್ತು ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.