ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಿಧ ಕಾರ್ಮಿಕ ವಿರೋಧಿ ಮಸೂದೆಗಳನ್ನ ವಿರೋಧಿಸಿ ಹುಬ್ಬಳ್ಳಿ ನಗರದಲ್ಲಿಂದು ಸಾವಿರಾರು ಕಾರ್ಮಿಕರು ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗೆ ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಹುಬ್ಬಳ್ಳಿಯ ಮಿನಿವಿಧಾನ ಸೌದ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೈಗಾರಿಕಾ ಸಂಬಂಧಗಳ ಸಂಹಿತ, ಸಾಮಾಜಿಕ ಭದ್ರತೆ ಸಂಹಿತೆ, ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿಗಳ ಸಂಹಿತೆ ಹಾಗೂ ವೇತನ ಸಂಹಿತೆಗಳ ಮಸೂದೆ ಜಾರಿಗೆ ಮಾಡಬಾರದು ಎಂದು ಒತ್ತಾಯ ಮಾಡಿದರು.
ದೇಶದ ದ್ರೋಹದ ಹೇಳಿಕೆ ಕೊಡುತ್ತಿರುವವರನ್ನು ಗುಂಡಿಟ್ಟು ಕೊಲ್ಲಬೇಕು: ಕೆ.ಎಸ್ ಈಶ್ವರಪ್ಪ
ಈಗಾಗಲೇ ಜಾರಿ ಮಾಡಲು ಅಸಾಧ್ಯ ಆಗಿದ್ದು, ಮತ್ತೆ ಜಾರಿ ಮಾಡಲು ಮುಂದಾಗಿದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.