Close Menu
Ain Live News
    Facebook X (Twitter) Instagram YouTube
    Tuesday, May 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಜನರ ಮುಂದೆ ಇಟ್ಟಿದ್ದ 145 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಟಕ್ಕರ್

    By Author AINMay 20, 2025
    Share
    Facebook Twitter LinkedIn Pinterest Email
    Demo

    ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
    ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.


    ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ, ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

    ಸರ್ವ ಜನಾಂಗದ ಶಾಂತಿಯ ತೋಟ
    ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.
    ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ, ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.
    ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.


    ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ
    ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

    ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ: ಸಿಎಂ
    ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.
    1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

    ಗೋಲ್ಡ್‌ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ಗೆ ಷರತ್ತು ಬದ್ದ ಜಾಮೀನು ಮಂಜೂರು.. ಜಾಮೀನು ಸಿಕ್ಕಿದ್ರೂ ಬಿಡುಗಡೆ ಭಾಗ್ಯವಿಲ್ಲ!

    ಚಿನ್ನದ ಬೆಲೆ ಈಗ ಎಷ್ಟಿದೆ?
    2014 ರಲ್ಲಿ 10,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು.

    Post Views: 9

    Demo
    Share. Facebook Twitter LinkedIn Email WhatsApp

    Related Posts

    ಹಕ್ಕು ಪತ್ರ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಜಾರಿ ಮಾಡಿದ್ದೇವೆ: ರಾಹುಲ್ ಗಾಂಧಿ

    May 20, 2025

    ರೀಲ್ಸ್‌ಗಾಗಿ ವಂದೇ ಭಾರತ್ ರೈಲಿನಲ್ಲೇ ಕುಣಿದು ಕುಪ್ಪಳಿಸಿದ ರೇಲ್ವೆ ಇಲಾಖೆ ಅಧಿಕಾರಿಗಳು: video viral

    May 20, 2025

    ಗೋಲ್ಡ್‌ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ಗೆ ಷರತ್ತು ಬದ್ದ ಜಾಮೀನು ಮಂಜೂರು.. ಜಾಮೀನು ಸಿಕ್ಕಿದ್ರೂ ಬಿಡುಗಡೆ ಭಾಗ್ಯವಿಲ್ಲ!

    May 20, 2025

    ಮಲೆಮಹದೇಶ್ವರಬೆಟ್ಟ ತಪ್ದಲಿನ ಸಾಲೂರು ಮಠದ ಹಿರಿಯಶ್ರೀ ಲಿಂಗೈಕ್ಯ

    May 20, 2025

    ಹುಬ್ಬಳ್ಳಿ: ಕಾರ್ಮಿಕ ಕಾಯ್ದೆ ಜಾರಿ ವಿರೋಧಿಸಿ ಬೀದಿಗಿಳಿದ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    May 20, 2025

    “ಕೆಡಿ” ಹೀರೋಯಿನ್‌ ರೀಷ್ಮಾ ನಾಣಯ್ಯ ಸಹೋದರಿ ಈಗ ಭಾಸ್ಕರ್‌ ರಾವ್ ಸೊಸೆ!

    May 20, 2025

    ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಎಚ್ ನಂಜೇಗೌಡ ಅವಿರೋಧ ಆಯ್ಕೆ. .!

    May 20, 2025

    ಪಾಕಿಸ್ತಾನ ನಿವಾಸಿಗಳಿಂತಿರುವ ಅಪರಿಚಿತರ ಪತ್ತೆ ಮಾಡಿ: ಖಾಕಿಗೆ ಮುತಾಲಿಕ್ ಆಗ್ರಹ

    May 20, 2025

    ಸುಬ್ಬ-ಸುಬ್ಬಿ ಫೋನ್‌ ನಂಬರ್‌ ಕಹಾನಿ…ದರ್ಶನ್‌ ಕೈ ಹಿಡಿದು ಫೋನ್‌ ನಂಬರ್‌ಗೆ ಒತ್ತಾಯಿಸಿದ ಗೌಡ್ತಿ..!

    May 20, 2025

    ಡಿ & ಗ್ಯಾಂಗ್‌ಗೆ ಶಾಕ್‌ ಕೊಟ್ಟ ಖಾಕಿ ಪಡೆ..ದರ್ಶನ್-ಪವಿತ್ರಾ ಗೌಡಗೆ ಮತ್ತೆ ಸಂಕಷ್ಟ!

    May 20, 2025

    ದೇಶದ ದ್ರೋಹದ ಹೇಳಿಕೆ ಕೊಡುತ್ತಿರುವವರನ್ನು ಗುಂಡಿಟ್ಟು ಕೊಲ್ಲಬೇಕು: ಕೆ.ಎಸ್ ಈಶ್ವರಪ್ಪ

    May 20, 2025

    ಮದ್ದೂರಿನಲ್ಲಿ ಮೇ.21 ಕ್ಕೆ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ

    May 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.