ಬೆಂಗಳೂರು: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ 5 ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್ ಸಾಧನೆಯ ಸಮಾವೇಶ ಮಾಡುತ್ತಿದೆ.
ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದ್ದಾರೆ.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್ ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿನ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ಗುಡುಗಿದ್ದಾರೆ.