ಬೆಂಗಳೂರು:- ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಸಿಟಿ ಮಂದಿ ಹೈರಾಣಾಗಿದ್ದಾರೆ. ಅಲ್ಲದೇ ವ್ಯಾಪಾರ ವಹಿವಾಟು ಭಾರಿ ಕುಸಿತ ಕಂಡಿದೆ.
ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಎಂಬ ಮಹಿಳೆ ಸಾವನ್ನಪ್ಪಿದ್ದರೆ, ಅಪಾರ್ಟ್ಮೆಂಟ್ ನೆಲಮಹಡಿಯಲ್ಲಿ ಮಳೆ ನೀರು ತೆರವುಗೊಳಿಸುವಾಗ ಇಬ್ಬರಿಗೆ ವಿದ್ಯುತ್ ಶಾಕ್ ಪ್ರವಹಿಸಿ ಮೃತಪಟ್ಟಿದ್ದಾರೆ. ಈ ನಡುವೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ವ್ಯಾಪರ ವಹಿವಟು ಕೂಡಾ ನೆಲಕಚ್ಚಿದೆ .
ಆರ್ ಮಾರುಕಟ್ಟೆ, ಯಶವಂಪುರ ಮಾರ್ಕೆಟ್ಗಳಲ್ಲಿ ವ್ಯಾಪಾರ ವಹಿವಾಟು ಮಳೆಯಿಂದ ಥಂಡಾ ಹಿಡಿದಿದೆ. ಹೂವು, ಹಣ್ಣು, ತರಕಾರಿ ಖರೀದಿಗೆ ಮಾರುಕಟ್ಟೆಗೆ ಬರುತ್ತಿದ್ದ ಜನರು ಮಳೆಗೆ ಭಯ ಬೀದ್ದು ಮನೆಯಿಂದ ಹೊರ ಬರುತ್ತಿಲ್ಲ. ಇತ್ತ ಗ್ರಾಹಕರು ಇಲ್ಲದೆ ಮಳೆಯಲ್ಲಿ ವ್ಯಾಪರವೂ ಆಗದೆ ವ್ಯಾಪಾರಿಗಳು ಕಂಗಲಾಗಿದ್ದಾರೆ.
ಸದಾ ಜನರಿಂದ ತುಂಬಿರುತ್ತಿದ್ದ, ಬೆಂಗಳೂರಿನ ವಾಣಿಜ್ಯ ವಹಿವಾಟಿನ ಪ್ರಮುಖ ಕೇಂದ್ರ ಚಿಕ್ಕಪೇಟೆಯಲ್ಲಿಯೂ ವ್ಯಾಪರ ವಹಿವಾಟು ಕುಸಿತಗೊಂಡಿದೆ. ಹಿಂದಿನ ಒಂದು ವಾರ ಭಾರತ ಹಾಗೂ ಪಾಕಿಸ್ತಾನ ಸಂಘರ್ಷದ ಹಿನ್ನಲೆ ಕೊಂಚ ವ್ಯಾಪರ ಡಲ್ ಆಗಿತ್ತು. ಈಗ ಕಳೆದ ಎರಡು ದಿನಗಳಿಂದ ಮಳೆ ಬರುತ್ತಿರುವುದರಿಂದ ಜನರು ಬರುತ್ತಿಲ್ಲ. ವ್ಯಾಪರ ಕುಸಿತವಾಗಿದೆ ಎಂದು ಚಿಕ್ಕಪೇಟೆ ವರ್ತಕರ ಸಂಘಟನೆಯ ಸಜ್ಜನ್ ರಾವ್ ತಿಳಿಸಿದ್ದಾರೆ.