ಬೆಂಗಳೂರು:- ಮೆಟ್ರೋದಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುವ ಮೂಲಕ ಅಪರಿಚಿತನೋರ್ವ ವಿಕೃತಿ ಮೆರೆದಿರುವ ಆರೋಪ ಕೇಳಿಬಂದಿದೆ.
ಮುಂಬೈ-ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ.. ಮ್ಯಾಚ್ ರದ್ದಾದ್ರೆ ಯಾರು ಪ್ಲೇ ಆಫ್ ಗೆ?
ಮೆಟ್ರೋ ಕ್ಲಿಕ್ಸ್” ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ನಮ್ಮ ಮೆಟ್ರೋದಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್ ಮಾಡಲಾಗಿದೆ. 5,538 ಹಿಂಬಾಲಕರನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪರಿಚಿತನೋರ್ವ ಹಂಚಿಕೊಂಡಿದ್ದಾನೆ. ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿದೆ.
ಸದ್ಯ ಅಪರಿಚಿತನ ವಿಕೃತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಲ್ಲಾ ವಿಡಿಯೋಗಳು ಡಿಲೀಟ್ ಆಗಿವೆ. ಘಟನೆ ಬಗ್ಗೆ ಕೆಲ ಜನರು ಈ ಬಗ್ಗೆ ಧ್ವನಿ ಎತ್ತಿದ್ದು, ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಮಾಡಿ ವಿಕೃತಿ ಹಿನ್ನೆಲೆ ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಕೇಸ್ ಪ್ರಕರಣ ದಾಖಲಾಗಿದೆ.