ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ದರ್ಶನ್, ಪವಿತ್ರಾ ಸೇರಿದಂತೆ 17 ಜನ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀ ಮೊರೆ ಹೋಗಿದ್ದರು. ಈ ಜಾಮೀನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರಿಂಕೋರ್ಟ್ ಸದ್ಯ ದಾಸನಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಸುಪ್ರೀಂಕೋರ್ಟ್ಗೆ ಸದ್ಯಬೇಸಿಗೆ ರಜೆ ಇದ್ದು, ಜುಲೈ 14ಕ್ಕೆ ರಜೆ ಅಂತ್ಯವಾಗಲಿದೆ. ಇದಾದ ಬಳಿಕ ವಿಚಾರಣೆ ನಡೆಸೋದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲಿಯವರೆಗೆ ದರ್ಶನ್ ಅಂಡ ಗ್ಯಾಂಗ್ ಗೆ ರಿಲೀಫ್ ಸಿಕ್ಕಂತೆ. ವಿಚಾರಣೆ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟ ಆಗಲಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ 5 ತಿಂಗಳಿಗೂ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿ ಹೊರಗೆ ಬಂದಿದ್ದಾರೆ. ಜಾಮೀನಿನ ಮೇಲೆ ಹೊರ ಬಂದ್ರು ನಟನಿಗೆ ಸಂಕಷ್ಟ ತಪ್ಪಿಲ್ಲ. ಆರೋಪಿಗಳ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ರು. ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ರು. ಸದ್ಯ ಈ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ.