ಬೆಂಗಳೂರು: ರಾಜ್ಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಇದೀಗ ಮತ್ತೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ.
ಅರಬ್ ರಾಷ್ಟ್ರಗಳಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಐಪಿಎಸ್ ಅಧಿಕಾರಿಯೊಬ್ಬರ ಪುತ್ರಿ ನಟಿ ರನ್ಯಾರಾವ್ ಪ್ರಕರಣ ರಾಜ್ಯ ರಾಜಕೀಯದಲ್ಲೂ ಸದ್ದು ಮಾಡಿತ್ತು.
ರಾಜ್ಯ ಸರ್ಕಾರ ರನ್ಯಾರಾವ್ ಪ್ರಕರಣದ ತನಿಖೆಯನ್ನು ಎಸ್ ಐಟಿ ಮೂಲಕ ನಡೆಸುತ್ತಿದ್ದರೆ, ಕೇಂದ್ರ ಸರ್ಕಾರ, ಇಡಿ ತನಿಖೆ ಆರಂಭಿಸಿದೆ.
ಸೀಟ್ ಬ್ಲಾಕಿಂಗ್ ಹಗರಣ: ಐಟಿ ಬಳಿಕ, ಇದೀಗ ಪರಮೇಶ್ವರ್ ಗೆ ಇಡಿ ಶಾಕ್
ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಣೆ ಹಗರಣದಲ್ಲಿ ನೂರಾರು ಕೋಟಿ ಅಕ್ರಮ ವ್ಯವಹಾರ ನಡೆದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ರನ್ಯಾ ರಾವ್ ಅವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಇದೀಗ, ಈ ಹಗರಣದಲ್ಲಿ ಗೃಹ ಸಚಿವ ಪರಮೇಶ್ವರ್ಗೂ ಲಿಂಕ್ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಇಡಿಯಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.