ಪಾಕಿಸ್ತಾನ: ಶಾಲಾ ಬಸ್‌ಗೆ ಆತ್ಮಾಹುತಿ ಬಾಂಬ್ ದಾಳಿಯಾದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಖುಜ್ದಾರ್ ಬಳಿ ನಡೆದಿದೆ. ಬಲೂಚಿಸ್ತಾನ್ ಪ್ರಾಂತ್ಯದ ಖುಜ್ದಾರ್‌ನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬಾಂಬ್ ಇರಿಸಿದ್ದ ಕಾರು ಬಂದು ಡಿಕ್ಕಿ ಹೊಡೆದಿದೆ.
ಈ ಬಾಂಬ್ ದಾಳಿಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಉಪ ಆಯುಕ್ತ ಯಾಸಿರ್ ಇಕ್ಬಾಲ್ ತಿಳಿಸಿದ್ದಾರೆ. ಸ್ಫೋಟ ಸಂಭವಿಸಿದಾಗ ಸೇನಾ ಸ್ವಾಮ್ಯದ ಶಾಲೆಗೆ ಹೋಗುತ್ತಿದ್ದ ಬಸ್‌ನಲ್ಲಿ ಸುಮಾರು 40 ವಿದ್ಯಾರ್ಥಿಗಳು ಇದ್ದರು.
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮುಗ್ದ ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಸಂಪೂರ್ಣ ಅನಾಗರಿಕತೆಯ ಕೃತ್ಯ ಎಂದು ದಾಳಿಕೋರರ ವಿರುದ್ಧ ಕಿಡಿಕಾರಿದ್ದಾರೆ.