ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಐಪಿಎಲ್ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ. ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ ಅವರು ಈ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ.
ನಿಂತ ಲಾರಿಗೆ ಡಿಕ್ಕಿ ಹೊಡೆದ ಸ್ಕೂಟಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ!
ಎಸ್, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ ಅವರು ಈ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ 2027 ರ ವಿಶ್ವಕಪ್ಗಾಗಿ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಇದು ಸರಿಯಾದ ಸಮಯ ಎಂಬುದು ರೋಹಿತ್ ಅಭಿಪ್ರಾಯವಾಗಿದೆ. ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದ ಕಾರಣ ಮತ್ತು ದೊಡ್ಡ ಪಂದ್ಯಾವಳಿಗಳ ಕಾರಣದಿಂದಾಗಿ ಈ ಶಸ್ತ್ರಚಿಕಿತ್ಸೆಯನ್ನು ಬಹಳ ಸಮಯದಿಂದ ಮುಂದೂಡುತ್ತಿದ್ದಾರೆ. ಆದರೆ ಈಗ ಅವರು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದು, ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳಲು ಅವರಿಗೆ ಸಾಕಷ್ಟು ಸಮಯವಿದೆ ಎಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ.