ಬೆಂಗಳೂರು:- ನಗರದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಬೆಂಗಳೂರು ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ. ಇದರ ನಡುವೆ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದ್ದು, ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳವಾಗಿದೆ.
Healthy Habit: ತಣ್ಣೀರಿಗಿಂತ ಆರೋಗ್ಯಕ್ಕೆ ಬಿಸಿ ನೀರು ಒಳ್ಳೆಯದಾ!? ತಜ್ಞರು ಹೇಳಿದ್ದಿಷ್ಟು!
ವೈರಾಣು ಜ್ವರ, ಕೆಮ್ಮು, ನೆಗಡಿ, ಅತಿಸಾರ ವಾಂತಿ, ಬೇಧಿ ಪ್ರಕರಣಹಳು ಹೆಚ್ಚಿವೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಹೆಚ್ಚಳ ಕಂಡುಬಂದಿದೆ. ಇದಕ್ಕೆಲ್ಲ ಸಿಲಿಕಾನ್ ಸಿಟಿಯಲ್ಲಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ವೈರಾಣು ಜ್ವರದ ಜೊತೆ ಇನ್ಫ್ಲುಯೆಂಜಾ ಪ್ರಕರಣಗಳಲ್ಲಿಯೂ ಏರಿಕೆ ಕಂಡು ಬರುತ್ತಿದೆ. ಜತೆಗೆ ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಸಿವಿ ರಾಮನ್ ನಗರ ಆಸ್ಪತ್ರೆ, ವಾಣಿವಿಲಾಸ್ ಆಸ್ಪತ್ರೆ ಸೇರಿದಂತೆ ಬಹುತೇಕ ಆಸ್ಪತ್ರೆಗಳಲ್ಲಿ ದಾಖಲಾಗುವ ಅರ್ದದಷ್ಟು ಹೊರ ರೋಗಿಗಳಲ್ಲಿಯೂ ವೈರಾಣು ಜ್ವರ ಕಂಡು ಬರುತ್ತಿದೆ
ಮಕ್ಕಳಲ್ಲಿ ಹಾಗೂ ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಹೆಚ್ಚಾಗಿ ಜ್ವರ ಕಂಡುಬರುತ್ತಿದೆ. ಮನೆಯಲ್ಲಿ ಸೋಂಕು ತಗುಲಿದವರಿಂದ ಮನೆ ಮಂದಿಗೆಲ್ಲ ಹರಡುತ್ತಿದೆ. ಡೆಂಗ್ಯೂ, ಮಲೇರಿಯಾದಂತಹ ಜ್ವರ ಪತ್ತೆಗೆ ಗುಣಲಕ್ಷಣ ಕಂಡುಬಂದ ರೋಗಿಗಳಿಗೆ ಪರೀಕ್ಷೆ ಮಾಡಿಸಲಾಗುತ್ತಿದೆ. ಜನರು ಆರೋಗ್ಯದಲ್ಲಿ ಸಣ್ಣ ಬದಲಾವಣೆಯಾದರೂ ನಿರ್ಲಕ್ಷ್ಯವಹಿದಂತೆ ವೈದ್ಯರು ಹೇಳಿದ್ದಾರೆ.