ಬೆಂಗಳೂರು:- ದಿನಾಂಕ 23-5-2025 ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಮ್ಯಾಚ್ ಆಯೋಜನೆಗೊಂಡಿತ್ತು. ಹೀಗಾಗಿ ಅಂದು ಮೆಟ್ರೋ ರೈಲು ಸಂಚಾರ ವಿಸ್ತರಿಸಿ ಈ ಹಿಂದೆ BMRCL ಆದೇಶ ಹೊರಡಿಸಿತ್ತು. ಆದರೆ ಮಳೆಯ ಕಾರಣದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ RCB VS SRH ಮ್ಯಾಚ್ ಲಕ್ನೋಗೆ ಶಿಫ್ಟ್ ಆಗಿದೆ. ಹೀಗಾಗಿ ಮೆಟ್ರೋದ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಮಳೆಯ ನಡುವೆ ಸಾಂಕ್ರಾಮಿಕ ರೋಗಗಳ ಭೀತಿ: ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳ!
ಈ ಹಿಂದೆ ಮೇ 23, 2025 ರಂದು ರಾತ್ರಿ 1:30 ರವರೆಗೆ ವಿಸ್ತರಿಸಿದ ಮೆಟ್ರೋ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.23ರ ಮೇ 2025 ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಪಂದ್ಯವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಲಖನೌದಲ್ಲಿ ನಡೆಸಲಿದ್ದು, ಈ ಹಿಂದೆ ಪ್ರಕಟಿಸಿದಂತೆ ಮೇ 23, 2025 ರಂದು ರಾತ್ರಿ 1:30 ರವರೆಗೆ ವಿಸ್ತರಿಸಿದ ಮೆಟ್ರೋ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ಸಾಮಾನ್ಯ ಸೇವೆ ಒದಗಿಸಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ಇರುವ ಕಾರಣ ಮೇ 23ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸನ್ರೈಸರ್ಸ್ ಹೈದರಾಬಾದ್ ಹಾಗೂ ಆರ್ಸಿಬಿ ನಡುವಣ ಪಂದ್ಯವನ್ನು ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್ಸಿಬಿ ಹಾಗೂ ಕೆಕೆಆರ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಮುಂದಿನ ಪಂದ್ಯ ಸ್ಥಳಾಂತರ ಮಾಡುವ ನಿರ್ಧಾರ ಕೈಗೊಂಡಿತ್ತು.