ಬೆಂಗಳೂರು:- ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಇಲ್ಲ!
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಬಂದರೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ
ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್, ಅದಕ್ಕಿಂತ ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಮಳೆಯಾದರೆ ಆರೆಂಜ್, ಅದಕ್ಕಿಂತಲೂ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ ಯೆಲ್ಲೋ ಅಲರ್ಟ್ ಘೋಷಿಸಲಾಗುತ್ತದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.