ಕ್ರಿಕೆಟ್ ಪ್ರಿಯರ ನೆಚ್ಚಿನ ಇಂಡಿಯನ್ ಪ್ರೀಮಿಯರ್ ಲೀಗ್ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ಲೀಗ್‌ನ ಮುಂದಿನ ಹಂತವನ್ನು ನಾಲ್ಕು ತಂಡಗಳು ಪ್ರವೇಶಿಸಿವೆ. ಆದರೆ ಈ ನಾಲ್ಕು ತಂಡಗಳಲ್ಲಿ ಮೊದಲ ಎರಡು ಸ್ಥಾನಕ್ಕಾಗಿ ಫೈಟ್ ನಡೆಯುತ್ತಿದೆ. ಸದ್ಯ ಅಗ್ರ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಈ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಗುರುವಾರ ಮೈದಾನ ಪ್ರವೇಶಿಸಲಿದೆ. ಇನ್ನು ಆರ್‌ಸಿಬಿ ಸಹ ಈ ಸ್ಥಾನವನ್ನು ಪಡೆಯಲು ಬಿಗ್ ಫೈಟ್ ನಡೆಸಲಿದೆ.
ಈ ಬಾರಿ ಪ್ಲೇ ಆಫ್‌ಗೆ ಗುಜರಾತ್ ಟೈಟಾನ್ಸ್, ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡಗಳು ಈ ಮೊದಲೇ ಅರ್ಹತೆ ಪಡೆದಿದ್ದವು. ಇನ್ನು ಒಂದು ತಂಡಕ್ಕಾಗಿ ಬುಧವಾರ ರೋಚಕ ಫೈಟ್ ನಡೆದಿತ್ತು. ಈ ವೇಳೆ ಮುಂಬೈ ಇಂಡಿಯನ್ಸ್ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್ ಪ್ರವೇಶಿಸುವ ಲೆಕ್ಕಾಚಾರ ನುಚ್ಚುನೂರಾಗಿದೆ
ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ ತಂಡಗಳು:-
ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ. ಶುಭ್ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್‌ಸಿಬಿ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.
ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ.
ಮುಂಬೈ ಇಂಡಿಯನ್ಸ್ ತಂಡವು ಬುಧವಾರ ಡೆಲ್ಲಿ ತಂಡ ಮಣಿಸಿ ಪ್ಲೇ ಆಫ್ ಗೆ ಎಂಟ್ರಿ ಪಡೆದಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.