ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕನ್ನಡಿಗರನ್ನು ಉಗ್ರರಿಗೆ ಹೋಲಿಸಿದ ಕೇಸ್: ಬೆಂಗಳೂರು ಪೊಲೀಸರಿಗೆ ಸಿಕ್ತಿಲ್ಲ ಗಾಯಕ ಸೋನು ನಿಗಮ್ ಡೇಟ್!
ರಾಜ್ಯಾದ್ಯಂತ ಇಂದು ಹಲವು ಕಡೆ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದರೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40 – 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ