ಬೆಂಗಳೂರು:- ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ ವಿಧಿಸಲು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?
ಸರ್ಕಾರದ ನಿರ್ಧಾರ ಈಗ ರಾಜಕೀಯ ಸ್ವರೂಪ ಪಡೆದು ಕಿಚ್ಚು ಹಚ್ಚಿದೆ. ಜನೌಷಧಿ ಕೇಂದ್ರಗಳ ರದ್ದತಿ ವಾಪಸ್ ಪಡೆಯುವಂತೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದು, ಜನೌಷಧ ಕೇಂದ್ರಗಳನ್ನು ರದ್ದುಪಡಿಸಿದ ಆದೇಶ ಮರುಪರಿಶೀಲಿಸಿ ಎಂದು ಮನವಿ ಮಾಡಿದ್ದಾರೆ.
ಆರ್ ಅಶೋಕ್ ಹೇಳಿದ್ದೇನು?
ಬಡ ಜನರಿಗೆ ಕಡಿಮೆ ದರದಲ್ಲಿ ಔಷಧ ನೀಡುತ್ತಿದ್ದೇವೆ. ಆದರೆ, ಕಾಂಗ್ರೆಸ್ ಸರ್ಕಾರ ಅದಕ್ಕೂ ಮಣ್ಣು ಹಾಕುತ್ತಿದೆ. ಇದೇನಾ ನಿಮ್ಮ ಸಾಧನೆ ಎಂದು ಶಾಸಕ ಅಶ್ವತ್ಥ್ ನಾರಾಯಣ್ ಕಿಡಿಕಾರಿದ್ದಾರೆ. ಕಮಿಷನ್ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಜನೌಷಧಿ ಕೇಂದ್ರಗಳನ್ನು ನಿರ್ಬಂಧಿಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ
ಇನ್ನೂ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ ವಿಧಿಸಲು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸೂರ್ಯ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿತ್ತು. ಇದೀಗ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷದ ಇತರ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಜನೌಷಧಿ ಕೇಂದ್ರಗಳ ಬಗ್ಗೆ ಗುಂಡೂರಾವ್ ಸ್ಪಷ್ಟನೆ:
ರಾಜ್ಯದಲ್ಲಿ 1400 ಜನೌಷಧ ಕೇಂದ್ರಗಳಿವೆ. 180 ಆಸ್ಪತ್ರೆಗಳ ಆವರಣಗಳಲ್ಲೂ ಜನೌಷಧ ಕೇಂದ್ರಗಳಿವೆ. ಆಸ್ಪತ್ರೆ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ನೀಡಬಾರದು. ಔಷಧಗಳ ಕೇಂದ್ರ ಉಚಿತವಾಗಿರಬೇಕು. ಜನೌಷಧಿಗಳಲ್ಲಿ ಬ್ರ್ಯಾಂಡೆಂಡ್ ಮೆಡಿಸಿನ್ ಮಾರಾಟ ಮಾಡಲಾಗುತ್ತದೆ. ಜನೌಷಧ ಜೊತೆಗೆ ಇತರೆ ಮೆಡಿಸಿನ್ ಶಾಪ್ ಸಹ ಇವೆ. ಸಂಜೀವಿನಿ ಎನ್ನುವ ಔಷಧ ಮಳಿಗೆ ಇವೆ. ಈ ಎಲ್ಲ ಔಷಧಿ ಮಳಿಗೆಗಳಿಗೂ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.