ಮಡಿಕೇರಿ:- ಇಂದು ಜಿಲ್ಲೆಯ ಹಲವೆಡೆ ಬೆಳಗ್ಗೆಯಿಂದಲೂ ಧಾರಾಕಾರವಾಗಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ನಮ್ಮ ಮೆಟ್ರೋದಲ್ಲಿ ಯುವತಿಯರ ಖಾಸಗಿ ವಿಡಿಯೋ ತೆಗೆದು ಅಪ್ಲೋಡ್ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್!
ನಿರಂತರವಾಗಿ ಸುರಿದ ಮಳೆ ಪರಿಣಾಮದಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕೊಂಚಮಟ್ಟಿಗೆ ನೀರು ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಕತ್ತಲೆಯಲ್ಲಿ ದಿನ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ವಿರಾಜಪೇಟೆ ತಾಲೂಕಿನ ಮಗ್ಗುಲ ಗ್ರಾಮದಲ್ಲಿ ಶನಿಮಹಾತ್ಮ ದೇವಾಲಯದ ಆವರಣದ ಕಾಂಪೌಂಡ್ ಕುಸಿದಿದ್ದು, ಮನೆಯ ಮಾಲೀಕರು ಅತಂಕಕ್ಕೆ ಒಳಗಾಗಿದ್ದಾರೆ. ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರದಲ್ಲಿ ಮಧ್ಯಾಹ್ನದ ನಂತರ ಭಾರಿ ಮಳೆಯಾಗಿದ್ದು, ಕಾವೇರಿ ಭಕ್ತರು ಹಾಗೂ ಪ್ರವಾಸಿಗರು ತಲಕಾವೇರಿ ದ್ವಾರದ ಬಳಿ ನಿಂತು ಮಳೆಯಿಂದ ರಕ್ಷಣೆ ಪಡೆದರು
ಗ್ರಾಮೀಣ ಭಾಗದಲ್ಲಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬು ಮೂರ್ನಾಡು ಮಧ್ಯ ರಸ್ತೆಗೆ ಅಡ್ಡಲಾಗಿ ಬಿದ್ದ ಮರದಿಂದ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ನಂತರ ಪಂಚಾಯಿತಿ ಸಿಬ್ಬಂದಿ ಗ್ರಾಮಸ್ಥರ ಸಹಕಾರದಿಂದ ಮರ ತೆರವು ಕಾರ್ಯಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.