ಲಕ್ನೋದ ಏಕನಾ ಕ್ರೀಡಾಂಗಣದಲ್ಲಿಂದು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಿದೆ.
ಲ್ಯಾಂಡ್ ಮಾಫಿಯಾಕ್ಕಾಗಿ ರಾಮನಗರಕ್ಕೆ ಬೆಂಗಳೂರು ಹೆಸರು: ಶೋಭಾ ಕರಂದ್ಲಾಜೆ!
ಜಿತೇಶ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಆರ್‌ಸಿಬಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೈದರಾಬಾದ್ ತಂಡಕ್ಕೆ ಬಿಟ್ಟುಕೊಟ್ಟಿತು.
ಮೊದಲ ಓವರ್‌ನಿಂದಲೇ ಸ್ಪೋಟಕ ಪ್ರದರ್ಶನ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮೊದಲ ವಿಕೆಟ್‌ಗೆ 25 ಎಸೆತಗಳಲ್ಲಿ 54 ರನ್ ಜೊತೆಯಾಟ ನೀಡಿತ್ತು. ಅತ್ತ ಅಭಿಷೇಕ್ ಶರ್ಮಾ 17 ಎಸೆತಗಳಲ್ಲಿ 34 ರನ್ ಗಳಿಸಿ ಔಟಾಗುತ್ತಿದ್ದಂತೆ ಇತ್ತ ಟ್ರಾವಿಸ್ ಹೆಡ್ ಕೂಡ 10 ಎಸೆತಗಳಲ್ಲಿ 17 ರನ್ ಬಾರಿಸಿ ಪೆವಿಲಿಯನ್‌ಗೆ ಮರಳಿದರು.
3ನೇ ವಿಕೆಟ್‌ಗೆ ಇಶಾನ್ ಕಿಶನ್ ಮತ್ತು ಕ್ಲಾಸೆನ್ ಜೋಡಿ 27 ಎಸೆತಗಳಲ್ಲಿ 48 ರನ್, 4ನೇ ವಿಕೆಟಿಗೆ ಕಿಶನ್-ಅನಿಕೇತ್ ವರ್ಮಾ ಜೋಡಿ 17 ಎಸೆತಗಳಲ್ಲಿ ಸ್ಫೋಟಕ 43 ರನ್ ಚಚ್ಚಿ ತಂಡದ ಮೊತ್ತ ಹೆಚ್ಚಿಸಿತು. ಇನ್ನೂ ಕೊನೆಯಲ್ಲಿ ನ್ಯಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಇಶಾನ್ ಕಿಶನ್ ಜೋಡಿ ಕೇವಲ 18 ಎಸೆತಗಳಲ್ಲಿ 43 ರನ್ ಚಚ್ಚಿ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು.
ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದೆ. ಈ ಮೂಲಕ ಎದುರಾಳಿ ಆರ್‌ಸಿಬಿಗೆ 232 ರನ್‌ಗಳ ಕಠಿಣ ಗುರಿ ನೀಡಿದೆ.