ಬೆಂಗಳೂರು:- ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ.
Accident Case: ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು!
CL9 ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಈ ಮೊದಲು ಲೈಸೆನ್ಸ್ ಶುಲ್ಕ 8,62,000 ರೂ. ಇತ್ತು. ಈಗ ಅದನ್ನು 15,00,000 ರೂ.ಗೆ ಹೆಚ್ಚಿಸಲಾಗಿದೆ. ಸೆಸ್ 2,25,000 ರೂ. ಸೇರಿ ಒಟ್ಟು ಒಟ್ಟು 17,25,000 ರೂ. ಆಗಲಿದೆ.
CL 6A ಸ್ಟಾರ್ ಹೋಟೆಲ್ ಲೈಸೆನ್ಸ್ ಶುಲ್ಕ 9,75,000 ರೂ. ಇದ್ದಿದ್ದು ಈಗ 20 ಲಕ್ಷ ರೂ. ಮಾಡಲಾಗಿದೆ. ಇದಕ್ಕೆ ಸೆಸ್ 3 ಲಕ್ಷ ರೂ. ಸೇರಿ ಒಟ್ಟು 23 ಲಕ್ಷ ರೂ. ಆಗಲಿದೆ.
CL 7 ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಲೈಸೆನ್ಸ್ ಶುಲ್ಕ 9,75,000 ರೂ. ಇದ್ದದ್ದು ಈಗ 17,00,000 ರೂ.ಗೆ ಏರಿಕೆಯಾಗಿದೆ. ಸೆಸ್ 2,55,000 ರೂ. ಸೇರಿ ಒಟ್ಟು 19,550,00 ರೂ. ಆಗಲಿದೆ.
26 ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29 ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಕ್ಲೋಸ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.