ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ನಕಲಿ ಬಾಬಾಗಳ ಹಾವಳಿ ಹೆಚ್ಚಾಗಿದ್ದು, ಕಾವಿ ತೊಟ್ಟ ಸ್ವಾಮೀಜಿಯಿಂದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಮನೆಗೆ ಕರೆದುಕೊಂಡು ಹೋಗ್ತೀನಿ ಅಂತ ಹೇಳಿ ಕಾಮಿಸ್ವಾಮಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜನ ಮೇಲೆ ಪೋಕ್ಸೋ ಕೇಸ್ ದಾಖಲು ಮಾಡಲಾಗಿದೆ. ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತೇನೆ ಅಂತ ಹೇಳಿ ರಾಯಚೂರು, ಬಾಗಲಕೋಟೆ ಜಿಲ್ಲೆಗೆ ಸುತ್ತಾಡಿಸಿ ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾನೆ.
ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!
ಈ ಕುರಿತು ಬಾಗಲಕೋಟ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಬಾಗಲಕೋಟೆ ಪೊಲೀಸರು. ತದನಂತರ ಬೆಳಗಾವಿಯ ಮೂಡಲಗಿ ಪೊಲೀಸ್ ಠಾಣೆಗೆ ಪ್ರಕರಣ ಹಸ್ತಾಂತರ ಮಾಡಿದ್ದಾರೆ. ಆರೋಪಿ ಕಾಮುಕ ಸ್ವಾಮಿಯನ್ನ ವಶಕ್ಕೆ ಪಡೆದು ಮೂಡಲಗಿ ಪೊಲೀಸರು ಜೈಲಿಗಟ್ಟಿದ್ದಾರೆ.
ವರದಿ : ಎಂ. ಕೆ. ಸಪ್ತಸಾಗರ , AIN ನ್ಯೂಸ್ ಚಿಕ್ಕೋಡಿ