ಚಿಕ್ಕಮಗಳೂರು: ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬಗ್ಗೆ ಸಿ.ಟಿ ರವಿ ಅಶ್ಲೀಲ ಹೇಳಿಕೆ ಬಳಿಕ ನಡೆದ ಹೈಡ್ರಾಮದ ಬಳಿಕ ಇದೇ ಮೊದಲ ಬಾರಿಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಬಿಗಿ ಪೊಲೀಸ್ ಭದ್ರತೆಯೊಂದಿಗೆ ಚಿಕ್ಕಮಗಳೂರಿಗೆ ಆಗಮಿಸಿದ ಸಚಿವೆಗೆ ದಾರಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.
ಜೆಸಿಬಿಯಲ್ಲಿ ಬೃಹತ್ ಹಾರ ಹಾಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸ್ವಾಗತ ನೀಡಲಾಯಿತು. ಬಳಿಕ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಸುಮಾರು 3 ಕಿ.ಮೀ. ಭರ್ಜರಿ ರೋಡ್ ಶೋ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಸಿ.ಟಿ ರವಿಗೆ ಟಕ್ಕರ್ ನೀಡಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ ವಿವಾದದಲ್ಲಿ ಡವ್ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ
ಬಾಗಿನ ರೂಪದಲ್ಲಿ ಅರಿಶಿನ ಕುಂಕುಮ
ಬೆಳಗಾವಿಯಲ್ಲಿ ಸಿ.ಟಿ ರವಿ ಬಂಧನ, ಹೈಡ್ರಾಮದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಗೆ ಬಿಸಿ ಮುಟ್ಟಿಸಲು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪ್ಲಾನ್ ಮಾಡಿದ್ದರು. ಬಾಗಿನ ರೂಪದಲ್ಲಿ ಲಕ್ಷ್ಮಿಗೆ ಅರಶಿನ ಕುಂಕುಮ ನೀಡಲು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪ್ರವಾಸಿ ಮಂದಿರದಲ್ಲಿ ಜಮಾಯಿಸಿದ್ದರು. ಆದರೆ, ಲಕ್ಷ್ಮಿ ಹೆಬ್ಬಾಳಕರ್ ಪ್ರವಾಸಿ ಮಂದಿರಕ್ಕೆ ಅಗಮಿಸದೇ ತೆರಳಿದ್ದಾರೆ. ಲಕ್ಷ್ಮಿ ಹೆಬ್ಬಾಳಕರ್ ಬರುತ್ತಾರೆಂದು ಪ್ರವಾಸಿ ಮಂದಿರ ಮುಂದೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ನಿಂತಿದ್ದರು. ಪ್ರವಾಸಿ ಮಂದಿರದ ಮುಂದೆಯೇ ತೆರಳಿದ ಸಚಿವೆ ವಿರುದ್ಧ ಬಿಜೆಪಿ ಕಾರ್ಯಕರ್ತೆಯರು ಅಸಮಾಧಾನ ಹೊರಹಾಕಿದ್ದಾರೆ.